Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪೊಲೀಸ್ ಇಲಾಖೆಯಲ್ಲಿ ನೇಮಕಾತಿಗೆ ಅಧಿಸೂಚನೆ

webdunia
ಮಂಗಳವಾರ, 13 ಸೆಪ್ಟಂಬರ್ 2022 (12:41 IST)
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ 3,064 ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯಸರ್ಕಾರವು 2,996 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ತೃತೀಯ ಲಿಂಗಿಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದ, 68 ತೃತೀಯ ಲಿಂಗಿಗಳ ನೇಮಕಾತಿಗೆ ಸರ್ಕಾರ ಆದೇಶಿಸಿದೆ.

ಆದರೆ ಹುದ್ದೆಗೆ ಅರ್ಜಿ ಹಾಕುವವರಿಗೆ ವಯಸ್ಸಿನ ಮಿತಿಯಿದ್ದು, 18 ವರ್ಷ ತುಂಬಿರಬೇಕು. SC-ST, OBC  ಅಭ್ಯರ್ಥಿಗಳಿಗೆ 27 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ 25 ವರ್ಷ ಮೀರಿರಬಾರದು.

ಜೊತೆಗೆ ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿ ನಿಗದಿ ಮಾಡಿದೆ. 

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಪ್ರಮಾಣ ಪತ್ರ ಪಡೆಯಬೇಕು. ಈ ಪ್ರಮಾಣ ಪತ್ರ ಇಲ್ಲದೆ ಹೋದರೆ ನೇಮಕಾತಿಗೆ ತೃತೀಯ ಲಿಂಗಿ ಮೀಸಲಾತಿ ಅನ್ವಯ ಆಗುವುದಿಲ್ಲ ಎಂದು ತಿಳಿಸಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೇಸ್ ಸರ್ಕಾರವನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ನಳಿನ್ ಕುಮಾರ್ ಕಟೀಲ್