Webdunia - Bharat's app for daily news and videos

Install App

ದೇಶದಲ್ಲಿ ಒಮಿಕ್ರಾನ್ ಕೇಸ್ 21ಕ್ಕೆ ಏರಿಕೆ!

Webdunia
ಸೋಮವಾರ, 6 ಡಿಸೆಂಬರ್ 2021 (07:30 IST)
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಒಂದೇ ದಿನದಲ್ಲಿ 17 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ದೇಶದಲ್ಲಿ ಓಮಿಕ್ರಾನ್ ಕೇಸ್ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ರಾಜಸ್ಥಾನದ ಜೈಪುರದಲ್ಲಿ 9, ಮಹಾರಾಷ್ಟ್ರದಲ್ಲಿ 7 ಮಂದಿಯಲ್ಲಿ ಹೊಸ ರೂಪಾಂತರ ಸೋಂಕು ಪತ್ತೆಯಾಗಿದೆ. ಈ ಪ್ರಕರಣಗಳು ವರದಿಯಾದ ಬೆನ್ನಲ್ಲೆ ಭಾರತದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಭಾನುವಾರ 21ಕ್ಕೆ ಏರಿಕೆ ಕಂಡಿದೆ. ಹೊಸ ರೂಪಾಂತರ ಸೋಂಕು ಪತ್ತೆಯಾದವರು ಹೆಚ್ಚು ಕೇಸ್ ಕಾಣಿಸಿಕೊಂಡ ದೇಶಗಳ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ ಅಥವಾ ರೋಗಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಕೊರೊನಾ ವೈರಸ್ಗೆ ಸೋಂಕು ದೃಢವಾದ ನಂತರ ಎಲ್ಲಾ ಸೋಂಕಿತರಲ್ಲಿ ಹೊಸ ರೂಪಾಂತರ ಸೋಂಕಿನ ಬಗ್ಗೆ ಖಚಿತಪಡಿಸಿಕೊಳ್ಳಲು ಜೀನೋಮ್ ಪರೀಕ್ಷೆ ನಡೆಸಲಾಗಿದೆ. ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ನಲ್ಲಿ 6, ಪುಣೆಯಲ್ಲಿ 1 ಹೊಸ ಪ್ರಕರಣಗಳು ವರದಿಯಾಗಿದೆ.
ರಾಜಸ್ಥಾನದ ಹೊಸ ಪ್ರಕರಣಗಳಲ್ಲಿ ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಕುಟುಂಬದ ನಾಲ್ವರು ಸದಸ್ಯರು ಸೇರಿದ್ದು, ಅಲ್ಲದೇ ಅವರ ಐದು ಸ್ನೇಹಿತರಲ್ಲಿ ಸಹ ಓಮಿಕ್ರಾನ್ ರೂಪಾಂತರ ಸೋಂಕು ದೃಢವಾಗಿದೆ. ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯು 9 ಮಂದಿಗೆ ಹೊಸ ರೂಪಾಂತರದಿಂದ ಸೋಂಕು ತಾಗಿದೆ ಎಂದು ದೃಢಪಡಿಸಿದೆ ಎಂದು ಆರೋಗ್ಯ ಕಾರ್ಯದರ್ಶಿ ವೈಭವ್ ಗಲ್ರಿಯಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments