Publish Date: Sun, 24 Apr 2022 (08:44 IST)
Updated Date: Sun, 24 Apr 2022 (09:46 IST)
ದೆಹಲಿಯಲ್ಲಿ ಸೋಂಕು ಉಲ್ಬಣಕ್ಕೆ ಕಾರಣವಾದ ಒಮಿಕ್ರೋನ್ನ 2 ಹೊಸ ಉಪತಳಿಗಳು ಬೆಂಗಳೂರಿನಲ್ಲೂ ಪತ್ತೆಯಾಗಿವೆ.
ಬೆಂಗಳೂರಿನ ಮೂಲದ ಇಬ್ಬರು ಸೋಂಕಿತರಲ್ಲಿ ಬಿಎ.2 ವಿಭಾಗಕ್ಕೆ ಸೇರುವ ಬಿಎ.2.10 ಹಾಗೂ ಬಿಎ.2.12 ಎಂಬ ಒಮಿಕ್ರೋನ್ ಉಪತಳಿಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.
ಆದರೆ, ಎರಡೂ ಉಪತಳಿಗಳ ಪತ್ತೆಯನ್ನು ಆರೋಗ್ಯ ಇಲಾಖೆ ಅಧಿಕೃತವಾಗಿ ಖಚಿತಪಡಿಸಿಲ್ಲ. ಈ ನಡುವೆ, ರಾಜ್ಯದಲ್ಲಿ ಸದ್ಯದಲ್ಲೇ 4ನೇ ಅಲೆ ಏಳುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಖಾಸಗಿ ಪ್ರಯೋಗಾಲಯದ ಮೂಲಗಳ ಪ್ರಕಾರ ಬಿಎ.2 ವಿಭಾಗಕ್ಕೆ ಸೇರಿದ ಒಮಿಕ್ರೋನ್ನ ಎರಡು ಹೊಸ ಉಪತಳಿಗಳು ರಾಜ್ಯದಲ್ಲಿ ಕಾಣಿಸಿಕೊಂಡಿವೆ.
ಬೆಂಗಳೂರಿನ ಖಾಸಗಿ ಪ್ರಯೋಗಾಲಯ ನಡೆಸಿರುವ ವಂಶವಾಹಿ ಪರೀಕ್ಷೆಯಲ್ಲಿ ಉಪತಳಿಗಳು ಪತ್ತೆಯಾಗಿದ್ದು, ಇಬ್ಬರೂ ಸೋಂಕಿತರು ಬೆಂಗಳೂರಿನ ಮೂಲದವರು ಎಂದು ತಿಳಿದುಬಂದಿದೆ.