Publish Date: Sat, 15 Jan 2022 (16:20 IST)
Updated Date: Sat, 15 Jan 2022 (16:23 IST)
ನವದೆಹಲಿ : ಕೊರೊನಾ ಸೋಂಕಿಗೆ ಒಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1 ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ.
ಕಿವಿ ಸೋಂಕಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ತಗುಲಿರುವುದು ದೃಢಪಟ್ಟಿತ್ತು. ಮಗು ಈಗ ಸಂಪೂರ್ಣ ಗುಣಮುಖವಾಗಿ ಡಿಸ್ಚಾರ್ಜ್ ಆಗಿದೆ ಎಂದು ಆಸ್ಪತ್ರೆ ವೈದ್ಯರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಆರೋಗ್ಯ ಸಿಬ್ಬಂದಿಯೊಬ್ಬರು ಕೋವಿಡ್ನಿಂದ ಗುಣಮುಖವಾದ ಮಗುವನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರನಡೆಯುತ್ತಿರುವ ದೃಶ್ಯದ ವೀಡಿಯೋವನ್ನು ಸಹ ಆಸ್ಪತ್ರೆ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ.