Select Your Language

Notifications

webdunia
webdunia
webdunia
webdunia

ಆಪರೇಷನ್ ಗಂಗಾ ಪೂರ್ಣ : ಉಕ್ರೇನ್ನಿಂದ ವಿದ್ಯಾರ್ಥಿಗಳು ವಾಪಸ್

ಆಪರೇಷನ್ ಗಂಗಾ ಪೂರ್ಣ : ಉಕ್ರೇನ್ನಿಂದ ವಿದ್ಯಾರ್ಥಿಗಳು ವಾಪಸ್
ನವದೆಹಲಿ , ಸೋಮವಾರ, 21 ಮಾರ್ಚ್ 2022 (13:57 IST)
ನವದೆಹಲಿ : ರಷ್ಯಾ, ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಉಕ್ರೇನ್ನಿಂದ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣವಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ.

ರಷ್ಯಾ, ಉಕ್ರೇನ್ ಹಿನ್ನೆಯಲ್ಲಿ ಉಕ್ರೇನ್ನಲ್ಲಿ ಸಿಲುಕೊಂಡಿದ್ದ ಭಾರತೀಯರನ್ನು ವಾಪಸ್ ಕರೆಸಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿತ್ತು. ರಷ್ಯಾ ಉಕ್ರೇನ್ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ.

ಇದರಿಂದಾಗಿ ಉಕ್ರೇನ್ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಅರ್ಜಿಗಳನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು. ಈ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಅಟಾರ್ನಿ ಜನರಲ್  ವೇಣುಗೋಪಾಲ್  ಇಲ್ಲಿಯವರೆಗೆ 22,500 ವಿದ್ಯಾರ್ಥಿಗಳು ಸ್ವದೇಶಕ್ಕೆ ಬಂದಿದ್ದು, ಈ ದೊಡ್ಡ ಮಿಷನ್ ಪೂರ್ಣವಾಗಿದೆ ಎಂದು ತಿಳಿಸಿದರು. 

ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತಕ್ಕೆ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಫಾತಿಮಾ ಅಹಾನಾ ಸೇರಿದಂತೆ ಹಲವು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ಇತ್ಯರ್ಥ ಪಡಿಸುವ ಸಂಬಂಧ ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಡೇಂಜರಸ್ ಫ್ಲೈಓವರ್‌ಗಳು!