Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡೀಸೆಲ್ ಅಬಕಾರಿ ದರ ಇಳಿಕೆ ?

ಪೆಟ್ರೋಲ್, ಡೀಸೆಲ್ ಅಬಕಾರಿ ದರ ಇಳಿಕೆ ?
ನವದೆಹಲಿ , ಭಾನುವಾರ, 22 ಮೇ 2022 (07:45 IST)
ನವದೆಹಲಿ : ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಿದೆ.

ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ. 

ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ 8 ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡಿದಂತಾಗಿದೆ.

ನಿನ್ನೆ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಪ್ರತಿ ಲೀಟರ್ಗೆ 2.48 ರೂ. ಮತ್ತು ಡೀಸೆಲ್ಗೆ 1.16 ರಷ್ಟು ಕಡಿಮೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಗೆಹ್ಲೋಟ್, ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿತಗೊಳಿಸಿರುವುದರಿಂದ ರಾಜ್ಯ ಸರ್ಕಾರವೂ ದರ ಇಳಿಕೆ ಮಾಡಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ 10.48 ರೂ. ಮತ್ತು ಡೀಸೆಲ್ 7.16 ರೂ.ಗಳಷ್ಟು ಕಡಿತವಾಗಲಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಂತರ್ಜಾತಿ ವಿವಾಹ: ಯುವಕನ ಬರ್ಬರ ಹತ್ಯೆ