Webdunia - Bharat's app for daily news and videos

Install App

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; ಸಾರ್ವಕಾಲಿಕ ಗರಿಷ್ಠ ಮಟ್ಟ

Webdunia
ಗುರುವಾರ, 7 ಅಕ್ಟೋಬರ್ 2021 (14:18 IST)
ನವದೆಹಲಿ : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಮೂರನೇ ದಿನವೂ ಏರಿಕೆಯಾಗಿದೆ. ಗುರುವಾರ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದರೂ, ದೇಶದಲ್ಲಿ ಪ್ರತಿ ಪೆಟ್ರೋಲ್ ದರ 30 ಪೈಸೆ ಮತ್ತು ಡೀಸೆಲ್ 35 ಪೈಸೆ ಹೆಚ್ಚಳ ಕಂಡಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹103.24 ಇದ್ದರೆ, ಮುಂಬೈನಲ್ಲಿ ₹109 ದಾಟಿದೆ. ಕೋಲ್ಕತ್ತದಲ್ಲಿ ₹103.94, ಚೆನ್ನೈನಲ್ಲಿ ₹100.86 ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹106.83 ಆಗಿದೆ.
ದೇಶದ ಇಪ್ಪತ್ತಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್ ದರ ₹100ಕ್ಕಿಂತಲೂ ಹೆಚ್ಚಿದೆ. ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ದರವಿದೆ. ದೇಶದಲ್ಲೇ ಅತಿ ಹೆಚ್ಚು ಪೆಟ್ರೋಲ್ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಅಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹114.92 ಇದೆ.
ಎಲ್ಪಿಜಿ ದರ: 3 ತಿಂಗಳಲ್ಲಿ ₹90 ಹೆಚ್ಚಳ, ಬೆಂಗಳೂರಲ್ಲಿ ಎಷ್ಟಿದೆ? ಇಲ್ಲಿದೆ ದರ
ಇನ್ನೂ ಕೆಲವು ದಿನ ತೈಲ ದರ ಏರಿಕೆ ಮುಂದುವರಿದರೆ, ಬಹುತೇಕ ನಗರಗಳಲ್ಲಿ ಡೀಸೆಲ್ ದರ ಸಹ ನೂರರ ಗಡಿ ದಾಟಲಿದೆ. ಮುಂಬೈನಲ್ಲಿ ಡೀಸೆಲ್ ದರ ₹99.55, ಬೆಂಗಳೂರಿನಲ್ಲಿ ₹97.40 ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments