Select Your Language

Notifications

webdunia
webdunia
webdunia
webdunia

ಗಗನಕ್ಕೇರಿದ ಪೆಟ್ರೋಲ್ ಬೆಲೆ!

ಮತ್ತೆ ಗಗನಕ್ಕೇರಿದ ಪೆಟ್ರೋಲ್ ಬೆಲೆ; ಡೀಸೆಲ್ ಬೆಲೆಯೇರಿಕೆಗೆ ಬ್ರೇಕ್

ಗಗನಕ್ಕೇರಿದ ಪೆಟ್ರೋಲ್ ಬೆಲೆ!
Bangalore , ಶುಕ್ರವಾರ, 2 ಜುಲೈ 2021 (10:14 IST)
Fuel Price Today: ಭಾರತದಲ್ಲಿ ಒಂದೆಡೆ ಕೊರೋನಾ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ.

 ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 102 ರೂ. ಆಗಿದೆ.ಇಂದು ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ಗೆ 102 ರೂ. ಆಗಿದೆ. ಇಂದು ಪೆಟ್ರೋಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.16 ರೂ. ಇದೆ. ಕೊಲ್ಕತ್ತಾದಲ್ಲಿ 99.04 ರೂ., ಮುಂಬೈನಲ್ಲಿ 105.24 ರೂ., ಚೆನ್ನೈನಲ್ಲಿ 100.13 ರೂ., ನೋಯ್ಡಾದಲ್ಲಿ 96.39 ರೂ., ಬೆಂಗಳೂರಿನಲ್ಲಿ 102.48 ರೂ., ಭುವನೇಶ್ವರದಲ್ಲಿ 99.77 ರೂ., ಹೈದರಾಬಾದ್ನಲ್ಲಿ 103.05 ರೂ., ಜೈಪುರದಲ್ಲಿ 106.18 ರೂ., ಲಕ್ನೋದಲ್ಲಿ 96.31 ರೂ., ಪಾಟ್ನಾದಲ್ಲಿ 101.49 ರೂ., ತಿರುವನಂತಪುರದಲ್ಲಿ 100.87 ರೂ. ಆಗಿದೆ.
webdunia




ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.18 ರೂ. ಇದೆ. ಚೆನ್ನೈನಲ್ಲಿ 93.72 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.54 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಗಡಿಯಲ್ಲಿ ಡ್ರೋನ್ ಪತ್ತೆ: ಹಿಮ್ಮೆಟ್ಟಿಸಿದ ಬಿಎಸ್ಎಫ್ ಯೋಧರು