Publish Date: Fri, 18 May 2018 (09:00 IST)
Updated Date: Fri, 18 May 2018 (09:03 IST)
ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬಿಜೆಪಿಗೆ ಬಹುತಮವಿಲ್ಲದಿದ್ದರೂ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬಿಜೆಪಿ ವಿರೋಧಿ ನಾಯಕರು ರಾಷ್ಟ್ರಾದ್ಯಂತ ಕಿಡಿ ಕಾರುತ್ತಿದ್ದಾರೆ. ಆದರೆ ಪ್ರಧಾನಿ ಮಾತ್ರ ಈ ಬಗ್ಗೆ ತುಟಿ ಪಿಟಕ್ ಎಂದಿಲ್ಲ.
ಸಾಮಾನ್ಯವಾಗಿ ಯಾವುದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಲೂ ಟ್ವಿಟರ್ ಮೂಲಕ ಶುಭಾಷಯ ವ್ಯಕ್ತಪಡಿಸುವ ಪ್ರಧಾನಿ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಸಂದೇಶ ನೀಡಿಲ್ಲ ಎನ್ನುವುದು ವಿಶೇಷವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.