Publish Date: Thu, 16 Aug 2018 (08:43 IST)
Updated Date: Thu, 16 Aug 2018 (08:45 IST)
ನವದೆಹಲಿ: 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಬಳಿಕ ಪ್ರಧಾನಿ ಮೋದಿ ನಿನ್ನೆ ಮಾಡಿದ ಕೆಲಸವೇನು ಗೊತ್ತೇ?
ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಅಲ್ಲಿ ನೆರೆದಿದ್ದ ಮಕ್ಕಳಿಗೆ ಶುಭಾಷಯ ಕೋರಿ ಪ್ರಧಾನಿ ಮೋದಿ ಸಂಜೆ ತಮ್ಮ ರಾಜಕೀಯ ಗುರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಬಗ್ಗೆ ತಿಳಿದು ಸೀದಾ ಆಸ್ಪತ್ರೆಗೆ ತೆರಳಿದ್ದಾರೆ.
ಅನಾರೋಗ್ಯದ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಕೆಲವಾರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುತ್ಸುದ್ದಿ ನಾಯಕನನ್ನು ನೋಡಲು ಪ್ರಧಾನಿ ಮೋದಿ ತೆರಳಿದ್ದಾರೆ. ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗಲೂ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮಾತುಗಳನ್ನು ಸ್ಮರಿಸಿಕೊಂಡಿದ್ದರು. ಸಂಜೆ ತಮ್ಮ ಎಂದಿನ ಭದ್ರತಾ ಪಡೆಗಳ ನೆರವಿಲ್ಲದೇ ಪ್ರಧಾನಿ ಮೋದಿ ವಾಜಪೇಯಿ ಭೇಟಿ ಮಾಡಿ ಬಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.