Publish Date: Thu, 21 Jun 2018 (08:59 IST)
Updated Date: Thu, 21 Jun 2018 (09:02 IST)
ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ವಿಶ್ವದಾದ್ಯಂತ ಯೋಗಾಭ್ಯಾಸ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಕೂಡಾ ಪ್ರತೀವರ್ಷದಂತೆ ಸಾರ್ವಜನಿಕರೊಂದಿಗೆ ಯೋಗಾಭ್ಯಾಸ ಮಾಡಿದರು.
ಡೆಹ್ರಾಡೂನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಯೋಗಾಭ್ಯಾಸ ಮಾಡುವ ಮೊದಲು ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ಯೋಗಾಭ್ಯಾಸ ನೀಡಿ ಎಂದು ಕರೆ ನೀಡಿದರು.
ಬಳಿಕ ಸಾರ್ವಜನಿಕರೊಂದಿಗೆ ತಾವೂ ಯೋಗದ ವಿವಿಧ ಆಸನಗಳನ್ನು ಮಾಡಿ ಗಮನ ಸೆಳೆದರು. ಇದೇ ಕಾರ್ಯಕ್ರಮದಲ್ಲಿ ಪತಂಜಲಿ ಮುಖ್ಯಸ್ಥ ಯೋಗ ಗುರು ಬಾಬಾ ರಾಮ್ ದೇವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.