Publish Date: Sat, 25 Jun 2022 (14:04 IST)
Updated Date: Sat, 25 Jun 2022 (13:39 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್ಗಳು ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ.
ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 34 ಕೇಸ್ ಮತ್ತು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ.
ಇಂದು 425 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,825ಕ್ಕೆ ಏರಿಕೆ ಕಂಡಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 716, ಮೈಸೂರು 8, ದಕ್ಷಿಣಕನ್ನಡ 7, ಉಡುಪಿ 6, ಶಿವಮೊಗ್ಗ 5, ಧಾರವಾಡ 4, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ತಲಾ ಎರಡೆರಡು ಪ್ರಕರಣ ಸೇರಿ ಒಟ್ಟು 750 ಕೇಸ್ ವರದಿಯಾಗಿದೆ.