ನವದೆಹಲಿ : ಭಾರತದಲ್ಲಿ ಕಡುಬಡತನ 2011-2019ರ ಅವಧಿಯಲ್ಲಿ ಶೇ.12.3ರಷ್ಟುಇಳಿಕೆಯಾಗಿದೆ.
2011ರಲ್ಲಿ ಶೇ.22.5ರಷ್ಟಿದ್ದ ಕಡುಬಡವರ ಸಂಖ್ಯೆ 2019ರಲ್ಲಿ ಶೇ.10.2ಕ್ಕೆ ಕುಸಿದಿದೆ ಎಂದು ವಿಶ್ವಬ್ಯಾಂಕ್ನ ಸಂಶೋಧನಾ ವರದಿಯೊಂದು ತಿಳಿಸಿದೆ.
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡ ಭಾರತದಲ್ಲಿ ಕಡುಬಡತನ ಬಹುತೇಕ ನಿರ್ಮೂಲನೆಯಾಗಿದೆ. ಸರ್ಕಾರಗಳು ಉಚಿತ ಆಹಾರ ಪೂರೈಸುತ್ತಿರುವುದರಿಂದ ಭಾರತದಲ್ಲಿನ ತೀವ್ರತರ ಬಡತನ ಕಳೆದ 40 ವರ್ಷಗಳಲ್ಲೇ ಈಗ ಕನಿಷ್ಠಕ್ಕೆ ಕುಸಿದಿದೆ ಎಂದು ಹೇಳಿತ್ತು.
ಅದರ ಬೆನ್ನಲ್ಲೇ ಈಗ ವಿಶ್ವಬ್ಯಾಂಕ್ ಕೂಡ ಭಾರತದಲ್ಲಿ ಕಡುಬಡವರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕುಸಿದಿರುವ ಬಗ್ಗೆ ಹೇಳಿರುವುದು ಆಶಾಭಾವನೆ ಮೂಡಿಸಿದೆ.
ವಿಶೇಷವೆಂದರೆ, ಭಾರತದ ನಗರ ಪ್ರದೇಶಗಳಿಗಿಂತ ಹೆಚ್ಚಾಗಿ ಗ್ರಾಮೀಣ ಪ್ರದೇಶದಲ್ಲಿ ಬಡತನ ಇಳಿಕೆಯ ಪ್ರಮಾಣ ಹೆಚ್ಚಿದೆ. ನಗರ ಪ್ರದೇಶಗಳಲ್ಲಿ ಬಡತನ ಕುಸಿತದ ಪ್ರಮಾಣ ಶೇ.7.9 ಇದ್ದರೆ ಗ್ರಾಮೀಣ ಪ್ರದೇಶದಲ್ಲಿ ಶೇ.14.7ರಷ್ಟಿದೆ.
ಭಾರತದಲ್ಲಿ ಬಡವರ ಸಂಖ್ಯೆ ಇಳಿಕೆಯಾಗಿದೆ. ಆದರೆ, ಈ ಹಿಂದೆ ಅಂದುಕೊಂಡಷ್ಟುಪ್ರಮಾಣದಲ್ಲಿ ಇಳಿಕೆಯಾಗಿಲ್ಲ ಎಂದೂ ವರದಿ ಹೇಳಿದೆ.