Publish Date: Mon, 06 Aug 2018 (09:17 IST)
Updated Date: Mon, 06 Aug 2018 (09:20 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಯಾವ ಕ್ಷೇತ್ರಕ್ಕೆ ಯಾವ ಸ್ಪರ್ಧಿ ಎಂಬ ವಿಚಾರಕ್ಕೆ ಈಗಾಗಲೇ ರಾಜಕೀಯ ಪಕ್ಷಗಳು ಲೆಕ್ಕಾಚಾರ ಆರಂಭಿಸಿವೆ.
ಕಳೆದ ಬಾರಿ ವಿಧಾನಸಭೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಪ್ರಜ್ವಲ್ ರೇವಣ್ಣಗೆ ಈ ಬಾರಿ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವುದಾಗಿ ಅಂದು ದೇವೇಗೌಡರು ಭರವಸೆ ನೀಡಿದ್ದರು. ಹಾಗಾಗಿ ಇದೀಗ ಪ್ರಜ್ವಲ್ ರೇವಣ್ಣಗೆ ಮೈಸೂರು ಟಿಕೆಟ್ ನೀಡಲು ದೇವೇಗೌಡರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಹೇಗಿದ್ದರೂ ಕಾಂಗ್ರೆಸ್ ಜತೆ ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡುವ ಯೋಚನೆ ಎರಡೂ ಪಕ್ಷಕ್ಕಿಲ್ಲ. ಹೀಗಾಗಿ ಮೈಸೂರು ಇಲ್ಲವೇ ತಮ್ಮದೇ ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಡಲು ಗೌಡರು ಚಿಂತನೆ ನಡೆಸಿದ್ದಾರೆ. ಪ್ರಜ್ವಲ್ ಹಾಸನದಿಂದ ಸ್ಪರ್ಧಿಸಿದರೆ ತಾವು ಮಂಡ್ಯದಿಂದ ಸ್ಪರ್ಧಿಸುವ ಲೆಕ್ಕಾಚಾರವೂ ಗೌಡರಿಗಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.