Publish Date: Thu, 05 Apr 2018 (13:34 IST)
Updated Date: Thu, 05 Apr 2018 (15:42 IST)
ಬೆಂಗಳೂರು: ನಿಂಬೆ ಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಪ್ರಚಾರ ಮಾಡುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಪ್ರತಾಪ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.
ಮೌಢ್ಯ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ಯಾಕಯ್ಯಾ ಎಂದು ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ. ಸೋಲಿನ ಭೀತಿಯಿಂದ ಕೈಯಲ್ಲಿ ನಿಂಬೆ ಹಣ್ಣು ಹಿಡಿಯುವಂತೆ ಮಾಡಿದ ಕರ್ನಾಟಕದ ಸಮಸ್ತ ಹಿಂದೂಗಳಿಗೆ ಧನ್ಯವಾದಗಳು ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಜತೆಗೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ವಾಹನದಲ್ಲಿ ಜನರತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ ಫೋಟೋ ಪ್ರಕಟಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯನವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ