Publish Date: Thu, 27 Jan 2022 (11:12 IST)
Updated Date: Thu, 27 Jan 2022 (11:57 IST)
ಬೆಂಗಳೂರು : ರಾಜ್ಯದೆಲ್ಲೆಡೆ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ.
ಕೋಲಾರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಕಾಲಿಕ ತುಂತುರು ಮಳೆಯಾಗಿದೆ.
ಬೆಂಗಳೂರು ನಗರದಲ್ಲೂ ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಬಯಲುಸೀಮೆ ಕೋಲಾರದಲ್ಲಿ ಅಕಾಲಿಕ ಮಳೆಯಾಗಿದೆ. ಬೆಳಗ್ಗೆಯಿಂದ ಹಲವೆಡೆ ತುಂತುರು ಮಳೆ, ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ.
ಕೋಲಾರ, ಮಾಲೂರು, ಬಂಗಾರಪೇಟೆ ತಾಲೂಕಿನಲ್ಲಿ ತುಂತುರು ಮಳೆಯಾದರೆ, ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ.
ರಾಜ್ಯದಲ್ಲಿ ಬದಲಾದ ವಾತಾವರಣದಿಂದ ಈಗಾಗಲೇ ಹಲವು ಖಾಯಿಲೆಗಳಿಗೆ ಜನ ತುತ್ತಾಗಿದ್ದು, ಕೆಮ್ಮು, ನೆಗಡಿ, ಜ್ವರದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಆತಂಕ ಮೂಡಿದೆ.