Select Your Language

Notifications

webdunia
webdunia
webdunia
webdunia

ಇನ್ಮುಂದೆ ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಪ್ರಧಾನಿ ಮೋದಿ

ಇನ್ಮುಂದೆ ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಪ್ರಧಾನಿ ಮೋದಿ
ಬೆಂಗಳೂರು , ಶನಿವಾರ, 26 ಆಗಸ್ಟ್ 2023 (09:03 IST)
ಬೆಂಗಳೂರು : ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು ಮೋದಿ ಇಟ್ಟಿದ್ದಾರೆ.

ಚಂದ್ರಯಾನ-3ರ ಯಶಸ್ಸಿನಿಂದಾಗಿ ಸ್ಥಳೀಯ ಉತ್ಪಾದನೆಗಳ ಶಕ್ತಿ ಪ್ರದರ್ಶನವಾಗಿದೆ. ಇದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೇ ಮಹಿಳಾ ವಿಜ್ಞಾನಿಗಳು ಚಂದ್ರಯಾನ-3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ : ನರೇಂದ್ರ ಮೋದಿ