ಪ್ರಧಾನಿ ನರೇಂದ್ರ ಮೋದಿ ಚೀನಾ ವಸ್ತುವಿದ್ದಂತೆ. ಅದಕ್ಕೆ ವಾರಂಟಿ, ಗ್ಯಾರಂಟಿ ಇಲ್ಲ- ಸಿಎಂ ಇಬ್ರಾಹಿಂ ಲೇವಡಿ

Webdunia
ಬುಧವಾರ, 2 ಮೇ 2018 (06:19 IST)
ಗದಗ : ಪ್ರಧಾನಿ ನರೇಂದ್ರ ಮೋದಿ ಚೀನಾ ವಸ್ತುವಿದ್ದಂತೆ. ಅದಕ್ಕೆ ವಾರಂಟಿ, ಗ್ಯಾರಂಟಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ  ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

ಜಿಲ್ಲೆಯ ನರಗುಂದದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ಬಿಜೆಪಿಯನ್ನು ಈಗ ಇಲ್ಲವಾಗಿಸಬೇಕು. ಹಿಂದೂ  ಮತ್ತು ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಇರಬೇಕು. ಮೋದಿಗೆ ಯಾರು ಹೆದರುವ ಅವಶ್ಯಕತೆ ಇಲ್ಲ’ ಎಂದು ತಿಳಿಸಿದ್ದಾರೆ.

 

ಹಾಗೇ ‘ಕಮಲಕ್ಕೆ ಸೂರ್ಯೋದಯದ ಚಿಂತೆ, ಸಿದ್ದರಾಮಯ್ಯಗೆ ಜನ್ರ ಚಿಂತೆಯಾದರೆ ಯಡಿಯೂರಪ್ಪಗೆ ಶೋಭಕ್ಕನ ಚಿಂತೆ. ಶೋಭಾ ಕರಂದ್ಲಾಜೆಗೆ ಟಿಕೇಟ್ ಸಿಗದಿರುವುದಕ್ಕೆ ಯಡಿಯೂರಪ್ಪನಿಗೆ ಶಾಕ್ ಆಗಿದೆ. ನಿಮ್ಮೆದುರಿಗೆ ನಾವು ಕಂತಿ ಭಿಕ್ಷೆಗೆ ಬಂದಿದ್ದೇವೆ. ಐದು ವರ್ಷ ನುಡಿದಂತೆ ನಡೆದಿದ್ದೇವೆ. ಸಾವಿರಾರು ಮಂದಿಗೆ ದಾಸೋಹ ಕೊಟ್ರೆ ಅದು ದೊಡ್ಡ ಮಠವಾಗುತ್ತೆ. ಆದ್ರೆ ಸಿದ್ದರಾಮಯ್ಯ ಅವ್ರ ಮಠದಾಗ ಕೋಟ್ಯಾಂತರ ಜನರಿಗೆ ದಾಸೋಹ ನೀಡಲಾಗಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇವಲ ಭಾಷಣಕ್ಕಷ್ಟೆ ಸೀಮಿತವಾಗಿದೆ. ಜೈಲು, ಬೇಲಿನ ಜನರನ್ನು ಕಟ್ಟಿಕೊಂಡು ಚುನಾವಣೆಗೆ ಸಜ್ಜಾಗಿದ್ದಾರೆ. ಅವರ ಆಟ ಕರ್ನಾಟಕದ ಟಗರಿನ ಮುಂದೇ ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments