Publish Date: Tue, 01 May 2018 (07:23 IST)
Updated Date: Tue, 01 May 2018 (07:27 IST)
ಉಡುಪಿ : ಪಕ್ಷದ ಪರ ಪ್ರಚಾರ ಮಾಡಲು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಉಡುಪಿಗೆ ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ ನಿಷೇಧ ಮಾಡಲಾಗಿದೆ. ಎಂಜಿಎಂ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಲಿರುವ ಕಾರಣ ಕರಾವಳಿ ಜಂಕ್ಷನ್ ನಿಂದ ಇಂದ್ರಾಣಿ ಜಂಕ್ಷನ್ ವರೆಗೆ ಪೊಲೀಸರು ನೋ ವೆಹಿಕಲ್ ಝೋನ್ ನಿರ್ಮಾಣ ಮಾಡುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗದಿರಲು ನಗರದ ಹೊರ ವಲಯದ ಮೂಲಕ ಬದಲಿ ರಸ್ತೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉಡುಪಿ ಎಸ್ ಪಿ ಲಕ್ಷ್ಮಣ ಬ. ನಿಂಬರ್ಗಿ ಪ್ರಧಾನಿ ಮೋದಿ ಆಗಮನದಿಂದ ನಗರದಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ನಗರದಲ್ಲಿ ಮತ್ತು ಪ್ರಧಾನಿ ಸಂಚರಿಸುವ ರಸ್ತೆಗಳ ಇಕ್ಕೆಲದ ಯಾವುದೇ ಅಂಗಡಿಗಳನ್ನು ಮುಚ್ಚಿಸುವುದಿಲ್ಲ. ಸಾರ್ವಜನಿಕ ಸಭೆಯಲ್ಲಿ ಮಾತ್ರ ಮಾಧ್ಯಮಗಳು ಪಾಲ್ಗೊಳ್ಳಬಹುದು ಎಂದು ಎಸ್‍ಪಿ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ