ನಿಷೇಧಾಜ್ಞೆ : ಪ್ರತಿಭಟನೆ, ಸಂಭ್ರಮಾಚರಣೆ ಬ್ಯಾನ್!

Webdunia
ಮಂಗಳವಾರ, 15 ಮಾರ್ಚ್ 2022 (11:33 IST)
ಬೆಂಗಳೂರು : ಹಿಜಾಬ್ ಕುರಿತ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿರುವ ಹಿನ್ನೆಲೆ.

ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಮಾ.15ರಿಂದ 21ರವರೆಗೆ ಬೆಂಗಳೂರು ನಗರಾದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಆದೇಶ ಹೊರಡಿಸಿದ್ದಾರೆ.

ಮಾ.15ರ ಬೆಳಗ್ಗೆ 6ರಿಂದ ಮಾ.21ರ ತಡರಾತ್ರಿ 12 ಗಂಟೆವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವೇಳೆ ಯಾವುದೇ ಪ್ರತಿಭಟನೆ, ಮೆರವಣಿಗೆ ಹಾಗೂ ಐದು ಜನಕ್ಕಿಂತ ಹೆಚ್ಚಿನ ಜನ ಒಂದೆಡೆ ಸೇರುವಂತಿಲ್ಲ.

ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು, ಸಾಗಾಟ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

 
ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ನ್ಯಾಯಾಲಯದ ಸುತ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೆ ಕಟ್ಟೆಚ್ಚರ ವಹಿಸಬೇಕು ಎಂದು ನಗರದ ಎಂಟು ವಲಯಗಳ ಡಿಸಿಪಿಗಳಿಗೂ ಸೂಚಿಸಲಾಗಿದೆ.

ಅಗತ್ಯಕ್ಕನುಗುಣವಾಗಿ ಹೆಚ್ಚುವರಿ ಕೆಎಸ್ಆರ್ಪಿ ತುಕಡಿಗಳು ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments