Publish Date: Wed, 28 Mar 2018 (12:17 IST)
Updated Date: Wed, 28 Mar 2018 (17:52 IST)
ನವದೆಹಲಿ : ಮಂಗಳವಾರ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,ಎಲ್ಲಾ ಪಕ್ಷಗಳು ಭರದಿಂದ ಚುನಾವಣೆಗೆ ಸಿದ್ದತೆಗಳನ್ನು ನಡೆಸುತ್ತಿದ್ದಾರೆ. ಆದರೆ ಇದೀಗ ಡೇಟ್ ಪಿಕ್ಸ್ ಆದ ಮರುದಿನವೇ ಕಾಂಗ್ರೆಸ್ ಗೆ ದೊಡ್ಡ ಆಘಾತವೊಂದು ಎದುರಾಗಿದೆ.
ಅದೆನೆಂದರೆ ಕಾಂಗ್ರೆಸ್ ನ ಪ್ರಭಾವಿ ಸಚಿವರಾದ ಪ್ರಮೋದ್ ಮಧ್ವರಾಜ್ ಬಿಜೆಪಿಯತ್ತ ವಾಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಸೇರುವ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ. ದೆಹಲಿಯಲ್ಲಿ ಈಗಾಗಲೇ ಬೀಡು ಬಿಟ್ಟಿರುವ ಯುವಜನ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಚಿವ ಸದಾನಂದಗೌಡರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದಾಗಿ ಮಾಹಿತಿ ಲಭ್ಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ