Select Your Language

Notifications

webdunia
webdunia
webdunia
webdunia

ವೇಶ್ಯಾವಾಟಿಕೆ ಅಪರಾಧವಲ್ಲ, ವೃತ್ತಿ: ಸುಪ್ರೀಂ ಕೋರ್ಟ್

ವೇಶ್ಯಾವಾಟಿಕೆ ಅಪರಾಧವಲ್ಲ, ವೃತ್ತಿ: ಸುಪ್ರೀಂ ಕೋರ್ಟ್
ನವದೆಹಲಿ , ಗುರುವಾರ, 26 ಮೇ 2022 (15:00 IST)
ನವದೆಹಲಿ : ವೇಶ್ಯಾವಾಟಿಕೆ ಪರ ಮತ್ತು ವಿರೋಧದ ಚರ್ಚೆಗಳು ದಶಕಗಳಿಂದ ಕೇಳಿ ಬರುತ್ತಿವೆ.

ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು.

ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್ ಮೊಖದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ಅಧ್ಯಕ್ಷತೆಯ ಪೀಠ ಇಂದು ಆದೇಶ ನೀಡಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ ಮಹಿಳೆಯರ ಹಕ್ಕುಗಳ ರಕ್ಷಣೆ ಕುರಿತಂತೆ ಆರು ನಿರ್ದೇಶನಗಳನ್ನು ಕೋರ್ಟ್ ನೀಡಿದೆ.

 "ವೇಶ್ಯಾವಾಟಿಕೆಯಲ್ಲಿ ಭಾಗಿಯಾದ ಮಹಿಳೆಯರಿಗೆ ಸಮಾಜದ ಪ್ರತಿಯೊಬ್ಬರಿಗೂ ಸಿಗಬೇಕಾದ ರಕ್ಷಣೆಯ ಹಕ್ಕಿದೆ. ಕ್ರಿಮಿನಲ್ ಮೊಕದ್ದಮೆ ಹೂಡುವಾಗ ಅವರ ವಯಸ್ಸು ಮತ್ತು ಅವರು ಸ್ವ ಇಚ್ಚೆಯಿಂದ ಭಾಗಿಯಾಗಿದ್ದಾರ ಎಂಬ ಬಗ್ಗೆ ತಿಳಿದುಕೊಳ್ಳಬೇಕು.

ಒಂದು ವೇಳೇ ಸ್ವಂತ ನಿರ್ಧಾರದ ಮೇಲೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಅಥವಾ ಕ್ರಿಮಿನಲ್ ಮೊಕದ್ದಮೆ ಹೂಡುವ ಹಕ್ಕು ಪೊಲೀಸರಿಗಿಲ್ಲ. ಅನಗತ್ಯ ಮಧ್ಯಪ್ರವೇಶ ಮಾಡುವುದನ್ನು ಕೋರ್ಟ್ ಸಹಿಸುವುದಿಲ್ಲ. ವೇಶ್ಯಾವಾಟಿಕೆಯೂ ಒಂದು ವೃತ್ತಿ. ದೇಶದ ಪ್ರತಿ ನಾಗರಿಕನಿಗೆ ಸಿಗುವ ರಕ್ಷಣೆ, ಹಕ್ಕು ಮತ್ತು ಗೌರವ ಈ ಮಹಿಳೆಯರಿಗೂ ದೊರೆಯಬೇಕು," ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾರಿಂದ ತೊಂದರೆ ಇದ್ಯೋ ಅವರ ನಿರ್ನಾಮಕ್ಕೆ ಯತ್ನ: ಡಿಕೆಶಿ