Publish Date: Mon, 02 Apr 2018 (16:50 IST)
Updated Date: Mon, 02 Apr 2018 (16:53 IST)
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.
ಸುಪ್ರೀ ಕೋರ್ಟ್ ಕಾಯ್ದೆ ತಿದ್ದುಪಡಿ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಆಗ್ರಹಿಸಿ ಪ್ರತಿಭಟನೆ. ಇಡ್ಲೀ ವಡಾ ಅಚ್ಚಾ ಹೈ ನರೇಂದ್ರ ಮೋದಿ ಲುಚ್ಚಾ ಹೈ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದ ದಲಿತ ಮುಖಂಡರು.ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರಪತಿಗಳು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಲಿತ ಮುಖಂಡರು. ಒಂದು ವೇಳೆ ಕೇಂದ್ರ ಸರಕಾರ ಎಸ್‌ಸಿ ಮತ್ತು ಎಸ್‌ಟಿ ವಿರುದ್ಧ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.