Select Your Language

Notifications

webdunia
webdunia
webdunia
webdunia

ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು , ಮಂಗಳವಾರ, 8 ಮಾರ್ಚ್ 2022 (07:01 IST)
ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
 
ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.

ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 25 – ಅರ್ಥಶಾಸ್ತ್ರ
ಏಪ್ರಿಲ್ 26 – ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ
ಏಪ್ರಿಲ್ 27 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28 – ಕನ್ನಡ, ಅರೇಬಿಕ್
ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ ವೆಲ್ನೆಸ್
ಮೇ 5- ಇಂಗ್ಲಿಷ್
ಮೇ 10- ಇತಿಹಾಸ,ಭೌತಶಾಸ್ತ್ರ
ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18- ಹಿಂದಿ

ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಲಾಗಿತ್ತು. ಮತ್ತೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಂಚರಾಜ್ಯಗಳ ಫಲಿತಾಂಶ?