Select Your Language

Notifications

webdunia
webdunia
webdunia
webdunia

ಪಿಯು ಎಕ್ಸಾಂ ವೇಳಾಪಟ್ಟಿ ಪ್ರಕಟ

ಪಿಯು ಎಕ್ಸಾಂ ವೇಳಾಪಟ್ಟಿ ಪ್ರಕಟ
ಬೆಂಗಳೂರು , ಬುಧವಾರ, 19 ಜನವರಿ 2022 (07:34 IST)
ಬೆಂಗಳೂರು : ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆ,ಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ
ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ.
ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ.
ಏ.20- ಇತಿಹಾಸ, ಭೌತಶಾಸ್ತ್ರ
ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್.
ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್.
ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ.
ಏ.25- ಅರ್ಥಶಾಸ್ತ್ರ
ಏ.26- ಹಿಂದಿ.
ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
ಏ.29- ಕನ್ನಡ.
ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ.4- ಇಂಗ್ಲಿಷ್


Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಗೆ ಮೂರನೇ ಅಲೆ ಮಾರಕ: ಬೆಂಗಳೂರಿನಲ್ಲಿ 700 ಪೊಲೀಸರಿಗೆ ಕೊರೋನಾ