ಬೆಂಗಳೂರು : ಹೊಸ ವರ್ಷವನ್ನು ಸಂತಸದಿಂದ ಬರಮಾಡಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.
ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿ ನ್ಯೂ ಇಯರ್ ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದ ಜನರಿಗೆ ಸರ್ಕಾರ ಶಾಕ್ ಕೊಟ್ಟಿದೆ. ನಗರದಲ್ಲಿ ಒಮಿಕ್ರಾನ್ ಕಾಟ ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಸಭೆಯಲ್ಲಿ ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಣೆ ಮಾಡಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.