Select Your Language

Notifications

webdunia
webdunia
webdunia
webdunia

ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ
ಬೆಂಗಳೂರು , ಬುಧವಾರ, 17 ಆಗಸ್ಟ್ 2022 (07:05 IST)
ಬೆಂಗಳೂರು : ಬಿಬಿಎಂಪಿ ವಾರ್ಡ್ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ.

ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

ಅಂತೆಯೇ ಈಗ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಬಿಬಿಎಂಪಿ ಅಧಿನಿಯಮ 2020 ಕಲಂ 8(3)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿ ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ