‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಕ್ಕೆ ಪುನೀತ್ ರಾಯಭಾರಿ

Webdunia
ಬುಧವಾರ, 30 ಮಾರ್ಚ್ 2022 (13:31 IST)
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು ನಟ ಪುನೀತ್ ರಾಜ್ ಕುಮಾರ್.
 
ಈ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯೂ ಆಗಿದ್ದರು. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರನ್ನು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅರಿವು ಅಭಿಯಾನದ ರಾಯಭಾರಿಯನ್ನಾಗಿ ಮಾಡಲಾಗಿದೆ. ಮಂಗಳವಾರವಷ್ಟೇ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಆರೋಗ್ಯ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿರ್ಲಾ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅಭಿಯಾನಕ್ಕೆ ಚಾಲನೆ ನೀಡಿದರು. 

ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಭಾಗಿಯಾಗಿದ್ದರು. ಈ ಅಭಿಯಾನದ ಕುರಿತು ಸುದೀರ್ಘ ಟ್ವಿಟ್ ಮಾಡಿರುವ ಅಶ್ವಿನಿ, ‘ಇದು ಡಾ|| ಪುನೀತ್ ಅವರ ಸಾಮಾಜಿಕ ಕಳಕಳಿ, ಅವಕಾಶ ವಂಚಿತರಿಗೆ ದೃಷ್ಟಿಯನ್ನು ಕಲ್ಪಿಸುವ ಸಲುವಾಗಿ ಇದ್ದ ಬದ್ಧತೆ,

ದೂರದೃಷ್ಠಿತ ಹಾಗೂ ನಿಷ್ಠೆಗೆ ನಾವು ಸಲ್ಲಿಸುವ ಭಾವಪೂರ್ಣ ಗೌರವ. ಡಾ|| ರಾಜ್ಕುಮಾರ್ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ಸಿಲಾರ್ ವಿಷನ್ ಪ್ರತಿಷ್ಠಾನ ಇವರ ಸಹಭಾಗಿತ್ವದಲ್ಲಿ ‘ನಮ್ಮ ದೃಷ್ಟಿ – ನಮ್ಮ ಕರ್ನಾಟಕ’ ಅರಿವು ಅಭಿಯಾನವನ್ನು ನೆನ್ನೆ ಕಾರ್ಯಾರಂಭ ಮಾಡಲಾಯಿತು’ ಎಂದು ಬರೆದುಕೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments