Publish Date: Wed, 13 Jun 2018 (09:12 IST)
Updated Date: Wed, 13 Jun 2018 (09:14 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಎರಡು ವರ್ಷಗಳ ಬಳಿಕ ರಂಜಾನ್ ಇಫ್ತಾರ್ ಕೂಟ ಆಯೋಜಿಸಿದ್ದು, ದೆಹಲಿ ಸಿಎಂ ಕೇಜ್ರಿವಾಲ್ ಗೆ ಆಹ್ವಾನ ನೀಡಲಾಗಿಲ್ಲ.
ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ಇಫ್ತಾರ್ ಕೂಟ ಆಯೋಜಿಸಲಾಗಿದೆ. 2015 ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಫ್ತಾರ್ ಕೂಟ ಆಯೋಜಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ಅಧ್ಯಕ್ಷರ ವತಿಯಿಂದ ಇದೇ ಮೊದಲ ಬಾರಿಗೆ ಇಫ್ತಾರ್ ಕೂಟ ಆಯೋಜಿಸಲಾಗುತ್ತಿದೆ.
ಆದರೆ 2019 ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ರಾಹುಲ್ ಗಾಂಧಿ ತಮ್ಮ ಮಿತ್ರ ಪಕ್ಷದ ನಾಯಕರಿಗೆ ಈ ಇಫ್ತಾರ್ ಕೂಟಕ್ಕೆ ಆಹ್ವಾನವಿತ್ತಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್ ಜೆಡಿ, ಬಿಎಸ್ ಪಿ, ನಾಯಕರೂ ಈ ಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.