Publish Date: Tue, 14 Aug 2018 (15:39 IST)
Updated Date: Tue, 14 Aug 2018 (15:40 IST)
ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮದುವೆ ಬಗ್ಗೆ ಆಗಾಗ ಒತ್ತಾಯ ಕೇಳಿ ಬರುತ್ತದೆ. ಆದರೆ ಇದೀಗ ಸ್ವತಃ ರಾಹುಲ್ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ.
ಅಷ್ಟೇ ಅಲ್ಲ ನನಗೆ ಮದುವೆ ಆಗಿದೆ. ನಾನು ಕಾಂಗ್ರೆಸ್ ಪಕ್ಷವನ್ನೇ ಮದುವೆಯಾಗಿದ್ದೇನೆ ಎಂದು ರಾಹುಲ್ ಸಂವಾದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.
ಸದ್ಯಕ್ಕೆ ತಮ್ಮ ಗುರಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯುವುದು. ಸದ್ಯಕ್ಕಂತೂ ತಮಗೆ ಮದುವೆಯಾಗುವ ಯಾವುದೇ ಯೋಜನೆಯಿಲ್ಲ ಎಂದು ರಾಹುಲ್ ಹೈದರಾಬಾದ್ ನಲ್ಲಿ ಸಂವಾದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲ, ನಾನು ಬೆಟ್ ಮಾಡ್ತೀನಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.