ರಾಜ್ಯದ ಕೆಲವೆಡೆ ಮಳೆ ಮುಂದುವರಿಕೆ!

Webdunia
ಮಂಗಳವಾರ, 30 ನವೆಂಬರ್ 2021 (07:13 IST)
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ನ. 30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ಉಡುಪಿ ಜಿಲ್ಲೆಯ ಮೂಡಾರು 20 ಮಿ.ಮೀ, ಶಂಕರನಾರಾಯಣ 18 ಮಿ.ಮೀ, ಉಳ್ಳೂರಿನಲ್ಲಿ 17.5 ಮಿ.ಮೀ ಹಾಗೂ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ 7.5 ಮಿ.ಮೀ. ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments