Webdunia - Bharat's app for daily news and videos

Install App

ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ : ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Webdunia
ಭಾನುವಾರ, 10 ಅಕ್ಟೋಬರ್ 2021 (08:25 IST)
ಬೆಂಗಳೂರು(ಅ.10) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ 19 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು,  ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ  ಅಂದರೆ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ,  ಅ.12 ಮತ್ತು 13ರಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊಅಲರ್ಟ್  ಘೋಷಣೆ ಮಾಡಲಾಗಿದೆ.
ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಮುಂದಿನ ೨೪ ಗಂಟೆಗಳಲ್ಲಿ ರಾಜ್ಯಾದ್ಯಂತ ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ.  ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

Bantwal murder; ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು

ಮುಂದಿನ ಸುದ್ದಿ
Show comments