Publish Date: Sat, 05 Aug 2023 (08:25 IST)
Updated Date: Sat, 05 Aug 2023 (08:29 IST)
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಯಲ್ಲಾಪುರ, ಲೋಂಡಾ, ಕೊಲ್ಲೂರು, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, ಕಮ್ಮರಡಿ, ತಾಳಗುಪ್ಪ, ಸಕಲೇಶಪುರದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.