Publish Date: Thu, 04 Nov 2021 (07:30 IST)
Updated Date: Thu, 04 Nov 2021 (07:32 IST)
ಬೆಂಗಳೂರು : ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೂ ಮಳೆ ಹೆಚ್ಚಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.