ಬೆಂಗಳೂರು : ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಏ.23ರವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ತಿಳಿಸಿದ್ದಾರೆ.
ಬಿಸಿಲ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು ನಗರಕ್ಕೆ ಇಂದು ವರುಣನ ಸಿಂಚನವಾಗಿದೆ. ರಾಜಧಾನಿಯ ಬ್ಯಾಟರಾಯನಪುರ, ಯಲಹಂಕ, ಹೆಬ್ಬಾಳ ಸುತ್ತಮುತ್ತ ಭಾರೀ ಮಳೆಯಾಗಿದೆ. ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ 3 ದಿನ ಮಾಳೆಯಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.