Daily Horoscope
✕

ಕರಾವಳಿಯಲ್ಲಿ ಮಳೆಗೆ ಇಂದು ಕೊಂಚ ಬಿಡುವು, ಅಂತೂ ಶಾಲೆ ಶುರು!

Webdunia
ಮಂಗಳವಾರ, 10 ಜುಲೈ 2018 (08:56 IST)
ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಶಾಲಾ, ಕಾಲೇಜುಗಳು ಇಂದು ಪುನರಾರಂಭಗೊಂಡಿವೆ.

ಕಳೆದ ನಾಲ್ಕು ದಿನದಿಂದ ಬಿಡುವಿಲ್ಲದೇ ಮಳೆ ಸುರಿಯುತ್ತಿದ್ದ ಕಾರಣ ಜಿಲ್ಲೆಯಾದ್ಯಂತ ಪ್ರವಾಹ ಸದೃಶ ವಾತಾವರಣವಿತ್ತು. ಇದೇ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ.

ಇಂದು ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜು ಪುನರಾರಂಭಗೊಂಡಿದೆ. ಆದರೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಆಯಾ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ.

ಇನ್ನೂ ಎರಡು ಮೂರು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಜುಲೈ 14 ರವರೆಗೂ ಕೊಡಗು, ಕರಾವಳಿ ಭಾಗದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಮೋದಿಗಿಂತ ಚೆನ್ನಾಗಿ ಇಂಗ್ಲಿಷ್ ಮಾತಾಡ್ತೀನಿ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ನವರಿಗೆ ಮೋದಿ ನಾಲ್ಕನೇ ಬಾರಿ ಪ್ರಧಾನಿಯಾದ್ರೆ ಎಂಬ ಭಯ: ಬಿವೈ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ದುರಹಂಕಾರಕ್ಕೆ ಜನರೇ ಮದ್ದು ಕೊಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಎಂಥಾ ಐನಾತಿ ಇರಬೇಕು… ಸ್ವಲ್ಪ ಅಡ್ರೆಸ್ ಹೇಳಿ ಎಂದು ಮಹಿಳೆ ಬಳಿ ಬಂದ ವ್ಯಕ್ತಿ ಕೊನೆಗೆ ಮಾಡಿದ್ದೇನು: ಶಾಕಿಂಗ್ Video

ಅಪಾಯಿಂಟ್ ಮೆಂಟ್ ತಗೊಂಡು ಬಾ ಎಂದ ಐಎಎಸ್ ಅಧಿಕಾರಿಗೆ ನೀವು ಪಬ್ಲಿಕ್ ಸರ್ವೆಂಟ್ ಎಂದು ಬೆವರಿಳಿಸಿದ ವ್ಯಕ್ತಿ: ವೈರಲ್ Video

ಮುಂದಿನ ಸುದ್ದಿ
Show comments