Select Your Language

Notifications

webdunia
webdunia
webdunia
webdunia

ಬಿಟ್ಟು ಬಿಡದೆ ಮಳೆ : ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ

ಬಿಟ್ಟು ಬಿಡದೆ ಮಳೆ :  ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ
ಬೆಂಗಳೂರು , ಗುರುವಾರ, 12 ಮೇ 2022 (07:14 IST)
ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವರುಣನ ಆರ್ಭಟ ಜೋರಿದೆ.

ದಿನಕಳೆದಂತೆ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗ್ತಾ ಇದೆ ಈಗಾಗಿ ಆರೋಗ್ಯ ಇಲಾಖೆ ಮೂರು ಖಾಯಿಲೆಗಳ ಬಗ್ಗೆ ಎಚ್ಚರವಹಿಸುವಂತೆವ ಅಲರ್ಟ್ ಮಾಡ್ತಿದೆ.

ರಾಜ್ಯದಲ್ಲಿ ಬಿರು ಬೇಸಿಗೆ ಮಧ್ಯೆ ವರುಣನ ಆರ್ಭಟ ಹೆಚ್ಚಾಗ್ತಿದೆ. ಇದರ ಮಧ್ಯೆ ಮತ್ತೊಂದು ಆತಂಕವೂ ಸೃಷ್ಟಿ ಆಗಿದೆ. ಅದೇ ಸಾಂಕ್ರಾಮಿಕ ರೋಗಗಳ ಹರಡುವ ಭೀತಿ. ಈ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ.

ಮಳೆಗಾಲ ಆರಂಭ ಹಿನ್ನೆಲೆ ಪ್ರಮುಖವಾಗಿ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸ್ತಿದ್ದಾರೆ.  ಆರೋಗ್ಯ ಇಲಾಖೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನ ಬಿಡುಗಡೆ ಮಾಡಿದೆ.

ಮನೆ ಮುಂದೆ ನೀರು ನಿಂತುಕೊಳ್ಳದಂತೆ ಸ್ವಚ್ಛತೆ ಕಾಪಾಡಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ಕಟ್ಟೆಚ್ಚರ ವಹಿಸಬೇಕು. ನೀರು ಸಂಗ್ರಹಿಸುವ ಡ್ರಮ್ಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು. ನೀರು ಸಂಗ್ರಹ ತೊಟ್ಟಿ, ಡ್ರಮ್ಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನ ಬಳಸಿ. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನ ಬಳಸಬೇಕು.


Share this Story:

Follow Webdunia kannada

ಮುಂದಿನ ಸುದ್ದಿ

BBMP ಗುಂಡಿಗೆ ಬಿದ್ದ ಗಾಯಕ