ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (09:17 IST)
ಕರ್ನಾಟಕದಲ್ಲಿಸೆಪ್ಟೆಂಬರ್ ತಿಂಗಳಿನಲ್ಲಿ ಮುಂಗಾರು  ಬಿರುಸು ಪಡೆದುಕೊಂಡಿದ್ದು, ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಇನ್ನು 4 ದಿನಗಳ ಕಾಲ  ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಈಗಾಗಲೆ ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ರವಾನಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಇನ್ನು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ  ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ರಾಜಸ್ಥಾನ ಮತ್ತು ಕೆಲವು ಭಾಗಗಳಲ್ಲಿ, ಮಧ್ಯಪ್ರದೇಶದ ಉಳಿದ ಭಾಗಗಳು, ಒಡಿಶಾ, ಪಶ್ಚಿಮ ಬಂಗಾಳ, ಈಶಾನ್ಯ ಭಾರತ, ಸಿಕ್ಕಿಂ, ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳು ಹಾಗೂ , ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಆಂಧ್ರಪ್ರದೇಶದಲ್ಲಿ  ಸಾಧಾರಣ ಮಳೆಯಾಗಲಿದೆ ಎಂದು ಹಲವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments