Select Your Language

Notifications

webdunia
webdunia
webdunia
webdunia

ವಾಟಾಳ್ ನಾಗರಾಜ್ ಹೇಳಿಕೆಗೆ ತಿರುಗೇಟು ನೀಡಿದ ಸೂಪರ್ ಸ್ಟಾರ್ ರಜನೀಕಾಂತ್

ವಾಟಾಳ್ ನಾಗರಾಜ್ ಹೇಳಿಕೆಗೆ ತಿರುಗೇಟು ನೀಡಿದ ಸೂಪರ್ ಸ್ಟಾರ್ ರಜನೀಕಾಂತ್
ಚೆನ್ನೈ , ಮಂಗಳವಾರ, 10 ಏಪ್ರಿಲ್ 2018 (07:20 IST)
ಚೆನ್ನೈ : ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯ ರಚನೆಗೆ ಕೈ ಜೋಡಿಸಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರ ಮೇಲೆ ಕಿಡಿಕಾರಿದ್ದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಹೇಳಿಕೆಗೆ ಇದೀಗ ರಜನೀಕಾಂತ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯನ್ನು ಕೇಂದ್ರ ಸರಕಾರ ರಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಮಾತನಾಡಿದ ಕನ್ನಡಪರ ಸಂಘಟನೆಯ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಚಿತ್ರಗಳನ್ನ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂಬುದಾಗಿ ಹೇಳಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನೀಕಾಂತ್ ಅವರು,’ ನಾವು ಏನೂ ತಪ್ಪು ಮಾಡಿಲ್ಲ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಿಲೀಸ್ ಗೆ ಸಂಕಷ್ಟ ಎದುರಾದರೇ ನಿರ್ಮಾಪಕರು ನೋಡಿಕೊಳ್ಳುತ್ತಾರೆ. ಅದನ್ನ ಮೀರಿ ಕಾನೂನು ಎಂಬುದು ಒಂದಿದೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೀನಾಯವಾಗಿ ಸೋಲಲಿದ್ದಾರೆ - ವಿಪಕ್ಷ ನಾಯಕ ಜಗದೀಶ್ ಶೆಟ್ಟರ್