Select Your Language

Notifications

webdunia
webdunia
webdunia
webdunia

ಪೂರ್ಣ ಶಾಲೆ ಆರಂಭಿಸಲು ಸಿದ್ದತೆ, ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿ : ಬಿ.ಸಿ.ನಾಗೇಶ್

ಪೂರ್ಣ ಶಾಲೆ ಆರಂಭಿಸಲು ಸಿದ್ದತೆ, ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿ : ಬಿ.ಸಿ.ನಾಗೇಶ್
ಬೆಂಗಳೂರು , ಸೋಮವಾರ, 11 ಅಕ್ಟೋಬರ್ 2021 (14:13 IST)
ಬೆಂಗಳೂರು,ಅ.11 : ಒಂದರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸಲು ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಪೂರ್ಣವಾಗಿ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಆ ಸಮಿತಿ ಒಪ್ಪಿಗೆ ಪಡೆದು ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು.
ಶಾಲೆ ಆರಂಭಕ್ಕೆ ಶೌಚಾಲಯದ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಅ.20ರವರೆಗೆ ರಜೆಯಿದ್ದು, ಅ.21ರಿಂದ ಅನುಮತಿ ದೊರೆತರೆ ಶಾಲೆ ಪ್ರಾರಂಭಿಸಲಾಗುವುದು. ಈಗಾಗಲೇ 6ರಿಂದ 12ನೇ ತರಗತಿವರೆಗೆ ಶಾಲಾ-ಕಾಲೇಜು ಆರಂಭವಾಗಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಪ್ರಮಾಣ ಶೇ.90ರಷ್ಟಿದೆ ಎಂದು ಹೇಳಿದರು.
ತೆಲಂಗಾಣ ಸೇರಿದಂತೆ ಬೇರೆ ರಾಜ್ಯಗಳ ಮಾದರಿಯನ್ನು ಪರಿಶೀಲಿಸಿ ಶುಲ್ಕ ನಿಯಂತ್ರಣ ಸಮಿತಿ ರಚನೆಯ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಅಲ್ಲಿ ಯಾವ ಯಾವ ರೀತಿ ಅನುಷ್ಠಾನವಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ಈಗಾಗಲೇ ಶಾಲಾ ಶುಲ್ಕದ ಬಗ್ಗೆ ಪೋಷಕರು ಮತ್ತು ಅಕಾರಿಗಳೊಂದಿಗೂ ಸಭೆ ನಡೆಸಲಾಗಿದೆ ಎಂದರು.
ಪಿಯುಸಿ ಪೂರಕ ಪರೀಕ್ಷೆ ನಡೆಸದಿರಲು ನಿರ್ಧರಿಸಲಾಗುವುದು. 12 ಸಾವಿರ ವಿದ್ಯಾರ್ಥಿಗಳೀದ್ದು, ಅಷ್ಟೂ ಮಂದಿಗೆ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಚರ್ಚೆ ನಡೆಯುತ್ತಿದೆ, ಪೂರಕ ಪರೀಕ್ಷೆ ನಡೆಸಿದರೂ ಕೂಡ ವಿದ್ಯಾರ್ಥಿಗಳು ಕಾಲೇಜಿಗೆ ಸೇರುವ ಅವಕಾಶವಿಲ್ಲ. ಹಾಗಾಗಿ ಪೂರಕ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕದಲ್ಲಿನ ದೋಷಗಳ ಬಗ್ಗೆ ದೂರುಗಳು ಬಂದಿರುವುದರಿಂದ ಸಮಿತಿ ರಚಿಸಲಾಗಿದೆ. ದೋಷಗಳನ್ನು ಸರಿಪಡಿಸುವ ಬಗ್ಗೆ ಆ ಸಮಿತಿ ಪರಾಮರ್ಶೆ ಮಾಡಲಿದೆ ಎಂದು ಸಚಿವರು ತಿಳಿಸಿದರು. ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ಕಾಯ್ದೆ ಪ್ರಕಾರ ಸದ್ಯದಲ್ಲೇ ಅಸೂಚನೆ ಹೊರಡಿಸಲಾಗುವುದು ಎಂದು ನಾಗೇಶ್ ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್​ಎಸ್​ಎಲ್​ಸಿ ಪೂರಕ ಫಲಿತಾಂಶ ಪ್ರಕಟ