ಬೆಂಗಳೂರು : ವಿವಿಧ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಇಷ್ಟಕ್ಕೇ ನಿಲ್ಲದೇ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಆಗ್ತಿದ್ದು, ಮಡಿಕೇರಿ ತಾಲೂಕಿನ ಕೊಯಿನಾಡು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮೇಲೆ ಬೃಹತ್ ಗುಡ್ಡ ಕುಸಿದಿದೆ.
ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪಯಸ್ವಿನಿ ನದಿ ನೀರು ಬಂದಿದ್ದು ರಸ್ತೆ ಬದಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆ ಮುಂಭಾಗದಲ್ಲಿ ನಿಲ್ಲಿಸಿದ ಕಾರುಗಳು ನೀರಿನ ರಭಸಕ್ಕೆ ತೇಲಾಡಿವೆ.