Select Your Language

Notifications

webdunia
webdunia
webdunia
webdunia

ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್!

ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್!
ಬೆಂಗಳೂರು , ಭಾನುವಾರ, 7 ಆಗಸ್ಟ್ 2022 (08:02 IST)
ಬೆಂಗಳೂರು : ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಲಿದ್ದು, ಇತರೆ ಜಿಲ್ಲೆಗಳಲ್ಲಿ ಮಳೆ ಕಡಿಮೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ಬೀದರ್, ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಡಿಕೇರಿಯಲ್ಲಿ ಕಾವೇರಿ ನದಿ ಆರ್ಭಟಿಸುತ್ತಿದೆ. ಚೆರಿಯಪರಂಬು ಕಲ್ಲುಮೊಟ್ಟೆ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತವಾಗಿದೆ. ಉಡುಪಿಯಲ್ಲಿ ನಿರಂತರ ಮಳೆಗೆ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಭಾರೀ ತೂಫಾನ್ ಹಿನ್ನೆಲೆ ಮೀನುಗಾರರು ಬೆಚ್ಚಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ಸಂಭ್ರಮ : ಇಂದಿನಿಂದ ಗಜಪಯಣ ಆರಂಭ