Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ: ಬೊಮ್ಮಾಯಿ

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ: ಬೊಮ್ಮಾಯಿ
ಬೆಂಗಳೂರು , ಗುರುವಾರ, 4 ನವೆಂಬರ್ 2021 (07:24 IST)
ಬೆಂಗಳೂರು : ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ
ಮಾಡಿದ ಕೆಲವೇ ಗಂಟೆಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಲ್ಯೂ ಆ್ಯಡೆಡ್ ಟ್ಯಾಕ್ಸ್ (VAT) ಇಳಿಕೆ ಮಾಡಿ, ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಕ್ರಮವನ್ನು ಹೊಗಳಿರುವ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯ ಸರ್ಕಾರದ ತೀರ್ಮಾನವನ್ನು ಟ್ವಿಟರ್ನಲ್ಲಿ ತಿಳಿಸಿದ್ದಾರೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಧನದ ದರದ ಹೊರೆ ಇಳಿಸುವ ಮೂಲಕವಾಗಿ ದೀಪಾವಳಿಗೆ ಅದ್ಭುತವಾದ ಉಡುಗೊರೆ ನೀಡಿದ್ದಾರೆ. ಈ ಹಬ್ಬಕ್ಕೆ ಸ್ಫೂರ್ತಿ ತುಂಬುವುದಕ್ಕೆ ಕರ್ನಾಟಕ ಸರ್ಕಾರವು ನಾಳೆ ಸಂಜೆಯಿಂದ (ನವೆಂಬರ್ 4, 2021ರ ಸಂಜೆ) ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲೂ ರೂ. 7 ಇಳಿಕೆ ಮಾಡಲಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಗಿಫ್ಟ್ ಕೊಟ್ಟ ಸರ್ಕಾರ!