Select Your Language

Notifications

webdunia
webdunia
webdunia
webdunia

ಮೀಸಲಾತಿ ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ

ಮೀಸಲಾತಿ ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ
ಬೆಂಗಳೂರು , ಶುಕ್ರವಾರ, 30 ಡಿಸೆಂಬರ್ 2022 (13:05 IST)
ಬೆಂಗಳೂರು : ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಜಾಣತನದ ಹೆಜ್ಜೆ ಇಡುವ ಮೂಲಕ ಗೊಂದಲ ಸೃಷ್ಟಿ ಮಾಡಿದೆ. ಈ ಮೀಸಲಾತಿ ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾತ್ರ ಅನ್ವಯ ಆಗಲಿದೆ.

ಆದ್ರೆ, ರಾಜಕೀಯವಾಗಿ ಈ ಮೀಸಲಾತಿ ಅನ್ವಯ ಆಗಲ್ಲ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣದಿಂದ 6 ಅಥವಾ 7% ಮೀಸಲಾತಿಯನ್ನು ಕಿತ್ತು ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಕೊಡಲು ಸರ್ಕಾರ ನಿರ್ಧಾರ ಮಾಡಿದೆ. 

ಹೊಸದಾಗಿ 2(C) ಹಾಗೂ 2(D) ಪ್ರವರ್ಗಗಳನ್ನು ಸೃಷ್ಟಿ ಮಾಡಲಾಗಿದ್ದು, ಇWSನಲ್ಲಿ ಉಳಿದ ಮೀಸಲಾತಿಯನ್ನು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಮಾಹಿತಿ ಬಿಡುಗಡೆ ಮಾಡ್ತೀನಿ : ಸಿಎಂ