Daily Horoscope
✕

ಫಲಿತಾಂಶ : ಎಣ್ಣೆ ಅಂಗಡಿಗಳು ಕ್ಲೋಸ್!

Webdunia
ಗುರುವಾರ, 10 ಮಾರ್ಚ್ 2022 (08:47 IST)
ಲಕ್ನೋ : ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.

ಆದರೆ, ಜಯದ ಗೆಲುವಿನ ಸಂಭ್ರಮ ಆಚರಿಸಲು, ಸೋಲಿನ ದುಃಖ ಮರೆಯಲು "ನಶೆ" ಇರುವುದಿಲ್ಲ. ಅಂದರೆ, ಚುನಾವಣಾ ಫಲಿತಾಂಶದ ದಿನವಾಗಿರುವ ಕಾರಣ ರಾಜ್ಯ ಎಲ್ಲಾ ಮದ್ಯದಂಗಡಿಗಳು ಹಾಗೂ ಬಾರ್ ಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದ್ದು, ಇಡೀ ದಿನ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ಅಬಕಾರಿ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಇದರಲ್ಲಿ ನೀಡಲಾಗಿದೆ.

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಲಕ್ನೋ ಬಿಡಿ ರಾಮ್ ತಿವಾರಿ ಈ ಕುರಿತಂತೆ ಮಾಹಿತಿ ನೀಡಿದ್ದು, ಮಾರ್ಚ್ 10 ರಂದು ಮತ ಎಣಿಕೆಗೆ ಸಂಬಂಧಿಸಿದಂತೆ, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿನ ಸ್ಟ್ರಾಂಗ್ ರೂಮ್ಗಳಿಗೆ ಮೂರು ಲೇಯರ್ ಸಿಎಪಿಎಫ್ ಭದ್ರತೆ ಇದೆ.

ಮೊದಲ ಅಂಚೆ ಮತಪತ್ರದ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಅದೇ ಸಮಯದಲ್ಲಿ, ಇವಿಎಂ ಮೂಲಕ ಚಲಾವಣೆಯಾದ ಮತಗಳ ಎಣಿಕೆಯು ಬೆಳಿಗ್ಗೆ 8:30 ರಿಂದ ಪ್ರಾರಂಭವಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments