Publish Date: Wed, 27 Jun 2018 (09:04 IST)
Updated Date: Wed, 27 Jun 2018 (09:06 IST)
ಬೆಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಕ್ತಿಯೊಬ್ಬರ ಜತೆ ಮಾತನಾಡುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಚರ್ಚೆಗಳು ಶುರುವಾಗಿದೆ.
ಸಿದ್ದರಾಮಯ್ಯ ಮಾತನಾಡುವ ಎರಡನೇ ವಿಡಿಯೋ ಬಿಡುಗಡೆಯಾಗಿದ್ದು, ಈ ವಿಡಿಯೋದಲ್ಲಿ ಸ್ವತಃ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಮುಗಿಯಲಿ. ಆಮೇಲೆ ನೋಡೋಣ ಈ ಸರ್ಕಾರ ಏನಾಗುತ್ತೋ ಅಂತ ಎನ್ನುವ ಸಂಭಾಷಣೆ ಲೀಕ್ ಆಗಿದೆ.
ಇದರಿಂದಾಗಿ ಸರ್ಕಾರದ ಆಯುಷ್ಯದ ಬಗ್ಗೆ ಚರ್ಚೆಗಳು ಶುರುವಾಗಿದೆ. ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರ ಇಂತಹ ಹೇಳಿಕೆಗಳಿಂದ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ರಾಹುಲ್ ಗಾಂಧಿಗೆ ದೂರು ನೀಡಲು ಎಚ್ ಡಿಕೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇವೆಲ್ಲಾ ಬೆಳವಣಿಗೆ ಮಧ್ಯೆ ಇನ್ನೂ ಎರಡು ದಿನ ಶಾಂತಿವನದಲ್ಲಿಯೇ ಉಳಿದುಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.