Publish Date: Tue, 28 Aug 2018 (08:00 IST)
Updated Date: Tue, 28 Aug 2018 (08:02 IST)
ನವದೆಹಲಿ: ಆರ್ ಎಸ್ಎಸ್ ಮೇಲೆ ಸದಾ ಕೆಂಡ ಕಾರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇದೀಗ ಅದೇ ಸಂಘಟನೆಯ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡುವ ನಿರೀಕ್ಷೆಯಿದೆ.
ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಉಪನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಆರ್ ಎಸ್ಎಸ್ ವಿರೋಧಿ ತತ್ವ ಹೊಂದಿರುವ ನಾಯಕರಿಗೂ ಆಹ್ವಾನ ನೀಡುವ ಸಾಧ್ಯತೆಯಿದೆ.
ಈ ಕಾರ್ಯಕ್ರಮ ಸೆಪ್ಟೆಂಬರ್ 17 ರಿಂದ 19 ರರೆಗೆ ನಡೆಯಲಿದೆ. ಹಿಂದೆ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿತ್ತು. ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೇ ಆಹ್ವಾನ ನೀಡಲು ಆರ್ ಎಸ್ಎಸ್ ಚಿಂತನೆ ನಡೆಸಿದೆ. ಆದರೆ ಇದಕ್ಕೆ ರಾಹುಲ್ ಪ್ರತಿಕ್ರಿಯೆ ಹೇಗಿರುತ್ತದೆ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.