ನವದೆಹಲಿ : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.
ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು.
ಒಮಿಕ್ರಾನ್ ಸೋಂಕು ಕೊವಿಡ್ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ.
147 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗುತ್ತಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!