Publish Date: Wed, 22 Jun 2022 (07:46 IST)
Updated Date: Wed, 22 Jun 2022 (09:21 IST)
ನ್ಯೂಯಾರ್ಕ್ : ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿ ಇಂದು ನೇಮಕ ಮಾಡಲಾಗಿದೆ.
ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್) 1987ರ ಬ್ಯಾಚ್ನ ಅಧಿಕಾರಿಯಾಗಿರುವ ರುಚಿರಾ ಅವರು ಪ್ರಸ್ತುತ ಭೂತಾನ್ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು.
ಇದೀಗ ಟಿ.ಎಸ್.ತಿರುಮೂರ್ತಿ ಅವರ ನಿವೃತ್ತಿ ನಂತರ ವಿಶ್ವಸಂಸ್ಥೆಯ ಭಾರತೀಯ ರಾಯಭಾರಿಯಾಗಲಿದ್ದಾರೆ. ಅವರು ಶೀಘ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.