Select Your Language

Notifications

webdunia
webdunia
webdunia
webdunia

ATMಗಳ ಮುಂದೆ ರಷ್ಯನ್ನರ ದಂಡು!

ATMಗಳ ಮುಂದೆ ರಷ್ಯನ್ನರ ದಂಡು!
ಮಾಸ್ಕೋ , ಬುಧವಾರ, 2 ಮಾರ್ಚ್ 2022 (08:36 IST)
ಮಾಸ್ಕೋ : ಯುಎಸ್ ಪಾವತಿ ಕಾರ್ಡ್ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್ ಕಾರ್ಡ್ ತಮ್ಮ ನೆಟ್ವರ್ಕ್ನಿಂದ ರಷ್ಯಾದ ಹಣಕಾಸು ಸಂಸ್ಥೆಗಳನ್ನು ನಿರ್ಬಂಧಿಸಿವೆ.

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸುತ್ತಿದೆ. ಸೋಮವಾರದಿಂದಲೇ ಈ ನಿರ್ಬಂಧ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಮಾನವೀಯ ಸಹಾಯಕ್ಕಾಗಿ 15.14 ಕೋಟಿ (2 ಮಿಲಿಯನ್ ಡಾಲರ್) ದೇಣಿಗೆ ನೀಡುವುದಾಗಿ ವೀಸಾ ಸ್ಪಷ್ಟಪಡಿಸಿದೆ. ಮಾಸ್ಟರ್ ಕಾರ್ಡ್ ಕೂಡ 15.14 ಕೋಟಿ ರೂ. ಕೊಡುಗೆ ನೀಡುವುದಾಗಿ ತಿಳಿಸಿದೆ.

ಸರ್ಕಾರದ ನಿರ್ಬಂಧಗಳ ಪ್ರಕಾರ ವಿಶೇಷವಾಗಿ ಗೊತ್ತುಪಡಿಸಿದ ರಾಷ್ಟ್ರದ್ದು ಎಂದು ಪಟ್ಟಿ ಮಾಡಲಾದ ಘಟಗಳಿಗೆ ವೀಸಾ ತನ್ನ ನೆಟ್ವರ್ಕ್ಗೆ ಪ್ರವೇಶವನ್ನು ಅಮಾನತುಗೊಳಿಸಿದೆ.

ರಷ್ಯಾದ ಕೇಂದ್ರ ಬ್ಯಾಂಕ್ ಮತ್ತು ಎರಡನೇ ಅತಿ ದೊಡ್ಡ ಸಾಲದಾತ ವಿಟಿಬಿ ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಯುಎಸ್, ಬ್ರಿಟನ್, ಯೂರೋಪ್ ಮತ್ತು ಕೆನಡಾ ದೇಶಗಳು ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಶನಿವಾರವೂ ಘೋಷಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಪುಟಿನ್ ವಿರುದ್ಧ ಜೋ ಬೈಡನ್ ಕಿಡಿ?